ಬಳ್ಳಾರಿ,ಫೆ.19- ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಅರ್ಜಿಗಳು ಇನ್ನುಮುಂದೆ ಕಲಬುರಗಿ ಪೀಠದಲ್ಲಿಯೇ ಸ್ವೀಕರಿಸಲಾಗುವುದು ಎಂದು ಆಯೋಗವು ತಿಳಿಸಿದೆ.
ಈ ಮುಂಚೆ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ, ಯಾದಗಿರಿ ಜಿಲ್ಲೆಗಳು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗುತ್ತಿದ್ದ ದ್ವೀತಿಯ ಮೇಲ್ಮನವಿಗಳು ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗದಲ್ಲಿ ಸಲ್ಲಿಸಬೇಕಿತ್ತು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗಲು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರು ತಮ್ಮ ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 19(3) ದ್ವಿತೀಯ ಮೇಲ್ಮನವಿಗಳನ್ನು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠ, ಮಹಲ್-ಎ-ಶಾಹಿ ಅತಿಥಿ ಗೃಹ, ಹಳೆಯ ಪಿ.ಡಬ್ಲೂö್ಯ.ಡಿ.ಐ.ಬಿ ಅವರಣ, ರೈಲ್ವೆ ಸ್ಟೇಷನ್ ಎದುರುಗಡೆ, ಕಲಬುರಗಿ ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಪೀಠದ ಶಾಖಾಧಿಕಾರಿ (ಪ್ರಭಾರಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.