ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ಕರ್ನಾಟಕ ಜೂನಿಯರ್ ವೈದ್ಯರ ಪ್ರತಿಭಟನೆ

Ravi Talawar
ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ  ಕರ್ನಾಟಕ ಜೂನಿಯರ್ ವೈದ್ಯರ ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​.12: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆ ವಿದ್ಯಾರ್ಥಿ ಮೇಲಿನ ಅತ್ಯಾಚಾರ, ಹತ್ಯೆ ಕೇಸ್​ಗೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ವಿರುದ್ಧ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಪ್ರತಿಭಟನೆಗೆ ಕರೆ ನೀಡಿದ್ದು ಇಂದಿನಿಂದ ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ತಿಳಿದಿದ್ದಾರೆ. ಇನ್ನು ಕರ್ನಾಟಕದಲ್ಲೂ ಜೂನಿಯರ್ ವೈದ್ಯರು  ಸೇವೆ ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು ಇತ್ತ ಸೀನಿಯರ್ ವೈದ್ಯರು ಕಪ್ಪು ಪಟ್ಟಿ ಕಟ್ಟಿಕೊಂಡು ರೋಗಿಗಳ ಚಿಕಿತ್ಸೆ ಮುಂದುವರೆಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜೂನಿಯರ್ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಇದರಿಂದ ಆಸ್ಪತ್ರೆಗಳಲ್ಲಿ ತುರ್ತು ಸೇವೆಯಲ್ಲಿ ಕೊಂಚ ವ್ಯತ್ಯಯವಾಗಿದೆ. ಸದ್ಯ ಸೀನಿಯರ್ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು ಆಸ್ಪತ್ರೆಗೆ ಹಾಜರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರತಿ ದಿನ ಆಸ್ಪತ್ರೆಗೆ ಸಾವಿರಾರು ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಎಲ್ಲಾ ವೈದ್ಯರು ಪ್ರತಿಭಟನೆಗೆ ಇಳಿಯುವುದರಿಂದ ರೋಗಿಗಳಿಗೆ ಸಮಸ್ಯೆ ಆಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ವೈದ್ಯರು ಸದ್ಯ ಪ್ರತಿಭಟನೆ ಬಗ್ಗೆ ಸಭೆ ನಡೆಸಿ ಚರ್ಚಿಸಿ ಪ್ರತಿಭಟನೆ ಕೈಗೊಳ್ಳಲಿದ್ದಾರೆ.

 

WhatsApp Group Join Now
Telegram Group Join Now
Share This Article