ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ ಕರ್ನಾಟಕ ಸರ್ಕಾರ; ರಾಜ್ಯದಲ್ಲಿ 7.5 ಲಕ್ಷ ಕೋಟಿ ರೂಪಾಯಿ ಹೂಡಿಕೆ ಗುರಿ

Ravi Talawar
ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ ಕರ್ನಾಟಕ ಸರ್ಕಾರ; ರಾಜ್ಯದಲ್ಲಿ 7.5 ಲಕ್ಷ ಕೋಟಿ ರೂಪಾಯಿ ಹೂಡಿಕೆ ಗುರಿ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರ ನೂಚನ ಕೈಗಾರಿಕಾ ನೀತಿ 2025-29 ಅನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮಂಗಳವಾರ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ಬೆಳವಣಿಗೆ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಗುರಿಯನ್ನೊಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಅನಾವರಣಗೊಳಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ನೂತನ ಕೈಗಾರಿಕಾ ನೀತಿಯನ್ನು ಅನಾವರಣಗೊಳಿಸಿದರು.

ಹೊಸ ನೀತಿಯಲ್ಲಿರುವ ಅಂಶಗಳನ್ನು ವಿವರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಈ ನೀತಿಯು ರಾಜ್ಯದಲ್ಲಿ 2029 ರ ವೇಳೆಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ನೀತಿಯ ಮೂಲಕ, ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮತ್ತು ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ಸುವ್ಯವಸ್ಥಿತಗೊಳಿಸಲಾಗುತ್ತದೆ ಎಂದು ಹೇಳಿದರು.

ಇದಲ್ಲದೆ, ಮುಂದಿನ 5 ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರು. ಬಂಡಾವಳ ತರುವಂಥ ಕ್ರಮಗಳನ್ನು ಕೈಗೊಳ್ಳುವುದು ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಸುವುದು, ಸನ್‌ರೈಸ್ ವಲಯದಲ್ಲಿ ರಾಜ್ಯವನ್ನು ದೇಶಕ್ಕೆ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ನಗರಗಳಲ್ಲಿ, ಹಿಂದುಳಿದ, ಅತೀ ಹಿಂದುಳಿದ ಜಿಲ್ಲೆ-ತಾಲೂಕುಗಳಲ್ಲಿ ಹೆಚ್ಚಿನ ಹೂಡಿಕೆಗೆ ಒತ್ತು ನೀಡಿ, ಅದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡುವುದಾಗಿ ನೂತನ ಕೈಗಾರಿಕಾ ನೀತಿಯಲ್ಲಿ ತಿಳಿಸಲಾಗಿದೆ ತಿಳಿಸಿದರು.

WhatsApp Group Join Now
Telegram Group Join Now
Share This Article