ಕೊಪ್ಪಳ: ಜಿಲ್ಲೆಯ ಕಸ್ತೂರಿ ಡಿ ಪತ್ತಾರ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿಯ ಸೇವೆಯನ್ನು ಗುರುತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ವರ್ಷದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರನ್ನು ಗುರುತಿಸಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಾಧಕಯರಿಗೆ ಪ್ರಶಸ್ತಿ ನೀಡಿ, ಸತ್ಕರಿಸಿ, ಶುಭ ಕೋರಿದ್ದಾರೆ. ಸಮಾರಂಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಧಕರ ಕುಟುಂಬಸ್ಥರು, ಅಭಿಮಾನಿಗಳು ನೆರೆದಿದ್ದರು.