ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಚಾಲನೆ

Ravi Talawar
ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಚಾಲನೆ
WhatsApp Group Join Now
Telegram Group Join Now

ಕೋಲಾರ: ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು.

ಕೋಲಾರ ತಾಲ್ಲೂಕಿನ ಲಕ್ಷ್ಮಿಸಾಗರದಲ್ಲಿ ಪಂಪ್‌ಹೌಸ್‌ ಇದ್ದು, ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಿಂದ ಅವರು ವರ್ಚುವಲ್‌ ವೇದಿಕೆಯಲ್ಲಿ ಉದ್ಘಾಟನೆ ಮಾಡಲಿದ್ದಾರೆ.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಹೇಳಿದರು.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ.

WhatsApp Group Join Now
Telegram Group Join Now
Share This Article