ಜು.22 ರಂದು ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ

Ravi Talawar
ಜು.22 ರಂದು ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ
WhatsApp Group Join Now
Telegram Group Join Now


ಬಳ್ಳಾರಿ,ಜು.16: ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜು.22 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article