ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ : ಕೆ.ಇ ಚಿದಾನಂದಪ್ಪ

Sandeep Malannavar
ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ : ಕೆ.ಇ ಚಿದಾನಂದಪ್ಪ
WhatsApp Group Join Now
Telegram Group Join Now
ಬಳ್ಳಾರಿ,ಜ.25 -ಸಮಾಜದಲ್ಲಿನ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಸಮುದಾಯಗಳು ಸಂಘಟಿತರಾಗಬೇಕು. ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುನ್ನೆಲೆಗೆ ಬರಬೇಕು. ಇದಕ್ಕಿರುವ ಮಾರ್ಗವೆಂದರೆ ಅದು ಶಿಕ್ಷಣ, ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ತಮ್ಮ ಮಕ್ಕಳಿಗೂ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.
ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಎನ್ನುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಹಿಂದುಳಿದ ಜನರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಹಿಂದುಳಿದ ಸಮಾಜದವರನ್ನು ಜಾಗೃತಗೊಳಿಸಲು ಸರ್ಕಾರ ಜಯಂತಿ ಕಾರ್ಯಕ್ರಮಗಳನ್ನು ಸಹ ಆಚರಿಸುತ್ತಿದೆ ಎಂದು ತಿಳಿಸಿದರು.
ಸವಿತಾ ಸಮಾಜವು ಎಲ್ಲ ವರ್ಗದ ಜನರಿಗೂ ತಾರತಮ್ಯವಿಲ್ಲದೆ ಸೇವೆ ನೀಡುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಮತ್ತಷ್ಟು ಸದೃಢವಾಗಬೇಕಿದೆ. ಪ್ರತಿಯೊಬ್ಬರೂ ತಾನು ಮಾಡುವ ಕಸುಬಿನ ಮೇಲೆ ಗೌರವ, ನಿಷ್ಠೆ ಇಟ್ಟುಕೊಂಡಾಗ ಬದುಕಿನಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ನಾವೀನ್ಯ ವಿಭಾಗದ ಡೀನ್ ಡಾ.ಮಂಜುನಾಥ.ಎಸ್ ಅವರು
ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಶಿವನ ದಿವ್ಯ ದೃಷ್ಠಿಯಲ್ಲಿ ಜನ್ಮ ತಾಳಿದವರು ಸವಿತಾ ಮಹರ್ಷಿ. ಪೌರಾಣಿಕ ವ್ಯಕ್ತಿಯಾದ ಸವಿತಾ ಮಹರ್ಷಿಯು ರಥಸಮ್ತಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದವರು. ಧಾರ್ಮಿಕವಾಗಿ ಶಿವನ ಎಡಗಣ್ಣನ್ನು ಚಂದ್ರನಿಗೆ ಬಲಗಣ್ಣನ್ನು ಸೂರ್ಯನಿಗೆ ಹೋಲಿಸಲಾಗುತ್ತದೆ. ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂಬುದು ಪ್ರತಿಥಿ ಇದೆ. ಇವರ ಮಗಳಾದ ಗಾಯತ್ರಿದೇವಿಯು ಶ್ರೇಷ್ಠ ಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. ಈ ಸಮಾಜಕ್ಕೆ 2000 ಸಾವಿರ ವರ್ಷಗಳ ಇತಿಹಾಸವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಮಟ್ಟದಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿರುಗುಪ್ಪ ತಾಲ್ಲೂಕಿನ ರಾರಾವಿಯ ಬಿ.ಚಿದಾನಂದ ಗವಾಯಿ ತಂಡ ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
*ಸಂಭ್ರಮದ ಮೆರವಣಿಗೆ:*
ಸವಿತಾ ಮಹರ್ಷಿ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಂಭ್ರಮದಿಂದ ನಡೆಯಿತು. ಮೆರವಣಿಗೆಗೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಕಳಸ ಹಿಡಿದ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.
ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ  ಮುನಿಸಿಪಲ್ ಕಾಲೇಜ್ ಮೈದಾನದಿಂದ ಆರಂಭವಾಗಿ  ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿ ಕಚೇರಿ ರಸ್ತೆ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿ
WhatsApp Group Join Now
Telegram Group Join Now
Share This Article