ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಕೇದಾರಿ ಹಜೇರಿಗೆ ಹೆಬ್ಬಾಳಕರ್‌ ಒಂದು ಲಕ್ಷ ನೆರವು

Ravi Talawar
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಕೇದಾರಿ ಹಜೇರಿಗೆ ಹೆಬ್ಬಾಳಕರ್‌ ಒಂದು ಲಕ್ಷ ನೆರವು
WhatsApp Group Join Now
Telegram Group Join Now
 *ಬೆಂಗಳೂರು:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಬೆಳಗಾವಿಯ ಸುಳೇಬಾವಿಯ ಕೇದಾರಿ ಹಜೇರಿ ಅವರ ಚಿಕಿತ್ಸೆ ವೆಚ್ಚಕ್ಕಾಗಿ ಒಂದು ಲಕ್ಷ ರೂಪಾಯಿ ಮಂಜೂರು ಮಾಡಿದ್ದಾರೆ.
ಕೇದಾರಿ ಹಜೇರಿ ಕುಟುಂಬದವರು ಆರ್ಥಿಕವಾಗಿ ತೀರಾ ಹಿಂದುಳಿದವರಾಗಿದ್ದು, ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗರಿಷ್ಠ ಮೊತ್ತ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದರು.
ಕೇದಾರಿ ಹಜೇರಿ ಹಾಗೂ ಅವರ ಕುಟುಂಬ ವರ್ಗದವರ ಮನವಿಗೆ ಸ್ಪಂದಿಸಿದ ಸಚಿವರು, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ  ದೊರಕಿಸಿಕೊಡುವುದರಲ್ಲಿ ಯಶಸ್ವಿಯಾಗಿದ್ದಾರೆ.
WhatsApp Group Join Now
Telegram Group Join Now
Share This Article