ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಂಪಣ್ಣಾ ಶಿರಟ್ಟಿ ನೇಮಕ

Ravi Talawar
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಂಪಣ್ಣಾ ಶಿರಟ್ಟಿ ನೇಮಕ
WhatsApp Group Join Now
Telegram Group Join Now

ಸಂಕೇಶ್ವರ,ಏಪ್ರಿಲ್​ 22 : ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಕೆಂಪಣ್ಣಾ ಶಿರಟ್ಟಿ ಅವರನ್ನು ನೇಮಕ ಮಾಡಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಯಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆದೇಶ ಹೊರಡಿಸಿದ್ದಾರೆ.

ತಾಲೂಕಿನಲ್ಲಿ  ಉತ್ತಮ ಸಂಘಟನಾ ಕೆಲಸ ಗುರುತಿಸಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಲು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮತ್ತು ಚಿಕ್ಕೋಡಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣರಾವ ಚಿಂಗಳೆ ಅವರ ಮುಖಂಡತ್ವದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಕೆಲಸ ಮಾಡಲು ನೇಮಕ ಮಾಡಿದ್ದಾರೆ.

ಇನ್ನೂ ಈ ಕುರಿತ ಪ್ರತಿಕ್ರಿಯೆ ನೀಡಿರುವ ಕೆಂಪಣ್ಣಾ ಶಿರಟ್ಟಿ, ತಾಲೂಕಿನ ಎಲ್ಲ ಪಕ್ಷದ ಮುಖಂಡರ  ಮಾರ್ಗದರ್ಶನದಲ್ಲಿ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶಕ್ತಿ ಮೀರಿ ಕೆಲಸ ಮಾಡುತ್ತೆನೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article