ಚಿಕ್ಕಮಗಳೂರು, ಅಕ್ಟೋಬರ್ 21: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52 ಸಾವಿರ ಕಾರ್ಡ್ ರದ್ದಾಗುವ ಸಾಧ್ಯತೆ.