ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

Ravi Talawar
ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ.

‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ನೀವು ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಹಾಸನ ಸಂಸದ, ಮತ್ತು ತಮ್ಮ ಮಗ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಎಚ್‌ಡಿ ರೇವಣ್ಣ ಅವರನ್ನು ಏಪ್ರಿಲ್ 29 ರಂದು ಬಂಧಿಸಲಾಗಿತ್ತು. ಬಳಿಕ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

WhatsApp Group Join Now
Telegram Group Join Now
Share This Article