ಬಳ್ಳಾರಿ,ಅ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಅ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್ ಗಣೇಶ್, ಬಿ.ಎಂ.ನಾಗರಾಜ, ಶಾಸಕರಾದ ಈ ಅನ್ನಪೂರ್ಣ, ವಿಧಾನಪರಿಷÀÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾಪೋರೇಷನ್ ಲಿಮಿಟೆಡ್ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ ಚಿದಾನಂದಪ್ಪ, ವೀರಶೈವ ಲಿಂಗಾಯತ ಪಂಚಮಶಾಲಿ ಸಮಾಜದ ಅಧ್ಯಕ್ಷ ಜಿ.ನೀಲಗೌಡ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ.ಕಲಾವತಿ ಬಿ.ಜಿ ಅವರು ಜಯಂತಿಯ ಕುರಿತು ವಿಶೇಷÀÀ ಉಪನ್ಯಾಸ ನೀಡುವರು.
ಬಳ್ಳಾರಿಯ ಜಯಲಕ್ಷಿö್ಮÃ ಎಂ.ಎಸ್ ಅವರಿಂದ ವಚನ ಸಂಗೀತ ಇರಲಿದೆ.
ಜಯಂತಿಯ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭಗೊAಡು ಇಂದಿರಾ ವೃತ್ತ-ಡಾ.ರಾಜ್ ಕುಮಾರ್ ರಸ್ತೆ- ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದ ಸಭಾಂಗಣದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು ಮಂಜುನಾಥ ಪಿ.ಎಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
————