Ad imageAd image

ಕೊಳಗೇರಿ‌ ಮಂಡಳಿ ಜೂ.ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ನಾಪತ್ತೆ: ಕೆಪಿಎಸ್​​ಸಿ ಕಚೇರಿಯಲ್ಲಿ ಪತ್ತೆ

Ravi Talawar
ಕೊಳಗೇರಿ‌ ಮಂಡಳಿ ಜೂ.ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ನಾಪತ್ತೆ: ಕೆಪಿಎಸ್​​ಸಿ ಕಚೇರಿಯಲ್ಲಿ ಪತ್ತೆ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್​ 11: ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ (KPSC) ಕಚೇರಿಯಲ್ಲೇ ಪತ್ತೆಯಾಗಿದೆ.

2016 ರಲ್ಲಿ ಕೊಳಗೇರಿ‌ ಮಂಡಳಿ (KSDB-RTI) ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ (High Court) ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆಯಾಗಿತ್ತು.

ಬಳಿಕ ಕೆಪಿಎಸ್​ಸಿಯ‌ ಎಲ್ಲ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಯ್ತು. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಸಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಕಾಲ ಶೋಧ ನಡೆಸಿದರು. ಆದರೆ ಕಡೆತ ಎಲ್ಲೂ ಸಿಕ್ಕಿರಲಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡು, ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

WhatsApp Group Join Now
Telegram Group Join Now
Share This Article