ಈ ವಾರ ತೆರೆಗೆ : ಕೋಟಿ ಕೌಟುಂಬಿಕ ಮನೋರಂಜನೆಯ  ಪಕ್ಕಾ ಕಮರ್ಷಿಯಲ್ ಚಿತ್ರ ಕೋಟಿ

Ravi Talawar
ಈ ವಾರ ತೆರೆಗೆ : ಕೋಟಿ ಕೌಟುಂಬಿಕ ಮನೋರಂಜನೆಯ  ಪಕ್ಕಾ ಕಮರ್ಷಿಯಲ್ ಚಿತ್ರ ಕೋಟಿ
WhatsApp Group Join Now
Telegram Group Join Now
     ಡಾಲಿ ಧನಂಜಯ್ ನಾಯಕನಾಗಿ ನಟಿಸಿರುವ ‘ಕೋಟಿ’ ಚಿತ್ರ ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.
     ಥ್ರಿಲ್ಲರ್ ಡ್ರಾಮ ಜಾನರ್ರಿನ ಈ ಸಿನಿಮಾದಲ್ಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.
       ನಾಯಕ ನಟ ಡಾಲಿ ಧನಂಜಯ “ಇದೊಂದು ಮಿಡಲ್ ಕ್ಲಾಸ್ ಸಾಮಾನ್ಯ ವ್ಯಕ್ತಿಯ ಕತೆ. ಇದು ಎಲ್ಲರಿಗೂ ಕನೆಕ್ಟ್ ಆಗುವ ಪ್ಯಾಮಿಲಿ ಎಂಟರ್ಟೈನರ್” ಎಂದು ಸಿನಿಮಾ ಕುರಿತು ಹೇಳಿದ್ದಾರೆ.
     ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡ ವಾಹಿನಿಯನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ಅವರು ಹೇಳಿರುವಂತೆ “ಕೋಟಿ ಇದೊಂದು ಕಂಟೆಂಟ್ ಇರುವ ಕಮರ್ಷಿಯಲ್ ಸಿನಿಮಾ. ಒಂದೊಳ್ಳೆ ಕತೆ, ಒಳ್ಳೆ ಮನರಂಜನೆ ಗ್ಯಾರಂಟಿ”.
     ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
     ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತ 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಈ ಸಿನಿಮಾದ ಕ್ಯಾಮರಮನ್.

WhatsApp Group Join Now
Telegram Group Join Now
Share This Article