ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ   

Ravi Talawar
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ   
WhatsApp Group Join Now
Telegram Group Join Now
 ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ  ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಣದೀಪ ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ರಾಜ್ಯದ ಅಭಿವೃದ್ಧಿ ವಿಷಯ ಹಾಗೂ   ಅಭಿವೃದ್ಧಿಗೆ ಪ್ರತಿ ಶಾಸಕರಿಗೆ ನಿಗದಿಪಡಿಸಿದ ನಿಧಿ ಬಗ್ಗೆ ಚರ್ಚಿಸಲಾಗಿದೆಯೇ ಹೊರತು,  ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆ ವಿಷಯವಾಗಿ ಯಾವುದೇ  ಚರ್ಚೆಯಾಗಿಲ್ಲ.   ಅಧ್ಯಕ್ಷರ ಆಯ್ಕೆ ಪಕ್ಷದ ಹೈಕಮಾಂಡ್   ನಿರ್ಧಾರ  ತೆಗೆದುಕೊಳ್ಳುತ್ತದೆ   ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (rcb) ತಂಡದ್ಧ ವಿಜಯೋತ್ಸವ  ವೇಳೆ ನಡೆದ ಘಟನೆಗಳ ವಿವರ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ.  ಅಧ್ಯಯನ ಮಾಡಿ ಸರ್ಕಾರ  ಕ್ರಮ ಕೈಗೊಳ್ಳಿದೆ. ಈ ಕಾರ್ಯಕ್ರಮ ಆಯೋಜನೆಗೆ ಆರ್‌ಸಿಬಿ ತಂಡದವರು ಲೋಕೋಪಯೋಗಿ ಸೇರಿದಂತೆ ಯಾವುದೇ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ’ ಎಂದು ಮಾಧ್ಯಮಗಳ ಪ್ರಶ್ನೆಗೆ ಸಚಿವರು ಉತ್ತರಿಸಿದರು.
WhatsApp Group Join Now
Telegram Group Join Now
Share This Article