30 ದಿನಗಳಲ್ಲಿ ರೈತರಿಗೆ ಬೆಳೆಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ ಭರವಸೆ

Ravi Talawar
30 ದಿನಗಳಲ್ಲಿ ರೈತರಿಗೆ ಬೆಳೆಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ ಭರವಸೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 9: ಕರ್ನಾಟಕದಲ್ಲಿ ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭಗೊಂಡಿದ್ದು, 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ನೇರ ವರ್ಗಾವಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 12.54 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದು, ರೈತರಿಗೆ ಪರಿಹಾರ ನೀಡಲು ಸರ್ಕಾರ ಸುಮಾರು 2,000 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ ಎಂದು ತಿಳಿಸಿದ್ದಾರೆ.

ಭೀಮಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದೊಂದಿಗೆ ಸೆಪ್ಟೆಂಬರ್‌ನಲ್ಲಿಉತ್ತರ ಕರ್ನಾಟಕದ ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಎರಡನೇ ಸುತ್ತಿನ ಪ್ರವಾಹವು ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚುವರಿ ಬೆಳೆ ನಷ್ಟಕ್ಕೆ ಕಾರಣವಾಯಿತು. ಈ ನಾಲ್ಕು ಜಿಲ್ಲೆಗಳಲ್ಲಿ ಜಂಟಿ ಕ್ಷೇತ್ರ ಸಮೀಕ್ಷೆಯನ್ನು ಪುನಃ ಮಾಡಿ ನಷ್ಟದ ಬಗ್ಗೆ ಲೆಕ್ಕಾಚಾರ ಪರಿಷ್ಕರಣೆ ಮಾಡುತ್ತೇವೆ. ಇದು ಸುಮಾರು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article