ಜಿಎಸ್‌ಟಿ ದರ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ರೂ. ನಷ್ಟ: ಸಚಿವ ಕೃಷ್ಣ ಬೈರೇಗೌಡ

Ravi Talawar
ಜಿಎಸ್‌ಟಿ ದರ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ರೂ. ನಷ್ಟ: ಸಚಿವ ಕೃಷ್ಣ ಬೈರೇಗೌಡ
WhatsApp Group Join Now
Telegram Group Join Now

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಸರಳೀಕರಣ ವ್ಯವಸ್ಥೆ ಪ್ರಸ್ತಾವನೆಯಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ರೂ. ನಷ್ಟವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ 70 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ 15 ಸಾವಿರ ಕೋಟಿ ರೂ. ನಷ್ಟತರಲಿದ್ದು, ಒಟ್ಟಾರೆ 85,000 ಕೋಟಿ ರೂ. ವಾರ್ಷಿಕ ಆದಾಯ ನಷ್ಟವನ್ನು ಎದುರು ಮಾಡಲಿದೆ ಎಂದು ಹೇಳಿದ್ದಾರೆ.

ಹೊಸ ಯೋಜನೆಯಡಿಯಲ್ಲಿ ಪ್ರತಿ ರಾಜ್ಯವು ಎಷ್ಟು ಕಳೆದುಕೊಳ್ಳಲಿದೆ ಎಂಬುದನ್ನು ವಿವರಿಸಲು ಕೇಂದ್ರವು ಯಾವುದೇ ಅಂದಾಜು ಅಥವಾ ಮಾರ್ಗಸೂಚಿಯನ್ನು ಒದಗಿಸಿಲ್ಲ. “ಜಿಎಸ್‌ಟಿ ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ಅವರು ಭರವಸೆ ನೀಡಿದ್ದರು. ಆದರೆ, ಅದು ವರ್ಷದಿಂದ ವರ್ಷಕ್ಕೆ ರಾಜ್ಯದ ಆದಾಯವನ್ನು ಕುಗ್ಗಿಸಿದೆ.

WhatsApp Group Join Now
Telegram Group Join Now
Share This Article