ಬೆಂಗಳೂರು, ಅಕ್ಟೋಬರ್ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರವೀಣ್ ಅವರ ಮೇಲೆ ಹೇರಲಾಗಿದ್ದ ಏಕಪಕ್ಷೀಯ ಅಮಾನತು ಆದೇಶವನ್ನು ನಾವು ಪ್ರಶ್ನಿಸಿದ್ದೆವು. ಈಗ ಅದಕ್ಕೆ ತಡೆ ಸಿಕ್ಕಿದೆ. ಯಾವುದೇ ರೀತಿಯ ಬೆದರಿಕೆ ಆರ್‌ಎಸ್‌ಎಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದಿದ್ದಾರೆ.


