ಬೆಂಗಳೂರು, ಜೂನ್ 26: ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅವಶ್ಯಕತೆ ಇರುವ ಮಾರ್ಗಗಳಲ್ಲಿ ಪೀಕ್ ಅವರ್ಗಳಲ್ಲಿ ಹೆಚ್ಚುವರಿ ಬಸ್ ಓಡಿಸಲು ಮುಂದಾಗಿದೆ. ಹಲವೆಡೆ ಈಗಾಗಲೇ ಹೆಚ್ಚುವರಿ ಬಸ್ ಆರಂಭಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳ ಬೇಡಿಕೆ ಇರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ವಿದ್ಯಾರ್ಥಿಗಳು ಪ್ರಾಣವನ್ನು ಪಣಕ್ಕಿಟ್ಟು ಕಿಕ್ಕಿರಿದು ತುಂಬಿದ ಬಸ್‌ಗಳ ಹಿಂದೆ ಓಡುವ ಹಾಗೂ ಫುಟ್ಬೋರ್ಡ್ನಲ್ಲಿ ನಿಂತು ಪ್ರಯಾಣಿಸುವ ಕೆಲವು ವೀಡಿಯೊಗಳು ವೈರಲ್ ಆದ ನಂತರ ಕೆಎಸ್‌ಆರ್‌ಟಿಸಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.