ಬೆಂಗಳೂರು, ಅ.05: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ.
ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಹೋರಾಟದಲ್ಲಿ ಭಾಗಿಯಾದರು. ಜೊತೆಗೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು. ಕೂಡಲೇ ಹೆಚ್ಡಿಕೆ ಹಾಗೂ ವಿಜಯೇಂದ್ರ ಅವರು ದೂರವಾಣಿ ಮೂಲಕ ಬೆಂಬಲ ಘೋಷಣೆ ಮಾಡಿದರು.