ಬೆಂಗಳೂರು,: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಧಾರವಾಡ ಜಿಲ್ಲೆಯ ಕುಂದಗೋಳದ ಟ್ರಕ್ ಟರ್ಮಿನಲ್ ನ ಸಮಸ್ಯೆಗಳ ಕುರಿತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಂದಿಗೆ ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಕುಂದಗೋಳ ಶಾಸಕರಾದ ಶ್ರೀ ಎಂ ಆರ್ ಪಾಟೀಲ್, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.