Ad imageAd image

ಪ್ರತಿ ತಿಂಗಳ 3ನೇ ಶನಿವಾರ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದು ಕೊರತೆ ಸಭೆ

Ravi Talawar
ಪ್ರತಿ ತಿಂಗಳ 3ನೇ ಶನಿವಾರ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದು ಕೊರತೆ ಸಭೆ
WhatsApp Group Join Now
Telegram Group Join Now

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಅಪರಾಹ್ನ ಸಭೆ ನಡೆಸಲಾಗುವುದು.

ಈ ಸಂಬಂಧ ಪ್ರಕಟಣೆ ಹೊರಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು 10ರಂದು ಬೆಂಗಳೂರಿನಲ್ಲಿ ನಡೆದ ಗ್ರಾಮ ಪಂಚಾಯತಿ ನೌಕರರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಬೇಡಿಕೆಯಂತೆ ನಿಗದಿತವಾಗಿ ಪ್ರತಿ ತಿಂಗಳು ಕುಂದು ಕೊರತೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್​ ಖರ್ಗೆ ಭರವಸೆ ನೀಡಿದ್ದರು.

ಅದರಂತೆ ಪ್ರತಿ ಮಾಹೆಯ ಮೂರನೇ ಶನಿವಾರದಂದು ಅಪರಾಹ್ನ 3 ಗಂಟೆಗೆ ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ. ನೌಕರರು ಸಭೆಗೆ ಹಾಜರಾಗಿ ತಮ್ಮ ಆಹವಾಲುಗಳ ಕುರಿತು ಚರ್ಚಿಸಬಹುದು ಎಂದು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article