ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ವಶ

Ravi Talawar
ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ವಶ
WhatsApp Group Join Now
Telegram Group Join Now

ಬಳ್ಳಾರಿ,ಆ.07 : ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತಂತೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಪಟ್ಟಣದ ವಿವಿಧ ಒಟ್ಟು 18 ಅಂಗಡಿಗಳ ಮೇಲೆ ಪುರಸಭೆಯ ಅಧಿಕಾರಿ, ಸಿಬ್ಬಂದಿ ಬುಧವಾರ ಆಕಸ್ಮಿಕ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದರು.

ದಾಳಿಯ ಸಂದರ್ಭದಲ್ಲಿ 8 ಕಿ.ಗ್ರಾಂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ಲಾಸ್ಟಿಕ್ ನಿಷೇಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ವ್ಯಾಪಾರಿಗಳ ಮೇಲೆ 1,000 ರೂ. ದಂಡ ವಿಧಿಸಲಾಯಿತು. ದಾಳಿಯ ಸಂದರ್ಭದಲ್ಲಿ ಪುರಸಭೆ ಆರೋಗ್ಯ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಕಮ್ಯೂನಿಟಿ ಮೋಬಿಲೈಜರ್ ಹಾಜರಿದ್ದರು.

WhatsApp Group Join Now
Telegram Group Join Now
Share This Article