ಬಳ್ಳಾರಿ,ಮೇ 21 ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗದವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಮೇ 26 ರಂದು ಬೆಳಿಗ್ಗೆ 11 ಗಂಟೆೆಗೆ ಕುರುಗೋಡು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಸಂಘದ ಪದಾಧಿಕಾರಿಗಳು, ದಲಿತ ಮುಖಂಡರುಗಳು ಹಾಗೂ ಸಮುದಾಯದ ಸಾರ್ವಜನಿಕರು ಸಭೆಗೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರುಗೋಡು: ಮೇ 26 ರಂದು ಕುಂದು ಕೊರತೆ ಸಭೆ
