ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ

Ravi Talawar
ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ
WhatsApp Group Join Now
Telegram Group Join Now

ನವದೆಹಲಿ: ಕುವೈತ್​ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಇಂದು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಿದರು. ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಅನ್ನು ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸೂಚಕವಾಗಿ ನೀಡಲಾಗುತ್ತದೆ.

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

WhatsApp Group Join Now
Telegram Group Join Now
Share This Article