ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಕೌಶಲ್ಯ ತರಬೇತಿ ಕೇಂದ್ರ ಆರಂಭ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Ravi Talawar
ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಕೌಶಲ್ಯ ತರಬೇತಿ ಕೇಂದ್ರ ಆರಂಭ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
WhatsApp Group Join Now
Telegram Group Join Now

 

ಬೆಂಗಳೂರು, ಆಗಸ್ಟ್‌ 26: ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯದ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಖಾಸಗಿ ಕಂಪನಿ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮಂಡಳಿಯ ವತಿಯಿಂದ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಕಾರ್ಮಿಕರಿಗೆ ಈಗಾಗಲೇ ನೀಡಲಾಗುತ್ತಿದ್ದು, ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯದ ತರಬೇತಿ ಕೇಂದ್ರಗಳಿಂದಲೂ ಸಾಕಷ್ಟು ಅನುಕೂಲವಾಗಲಿದೆ.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಎಚ್ ಎನ್ ಗೋಪಾಲಕೃಷ್ಣ, ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ, ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ಡಾ. ಸಂಗಪ್ಪ ಉಪಾಸೆ, ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಮಂಡಳಿಯ ಸದಸ್ಯರು, ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಖಾಸಗಿ ಕಂಪನಿ ಮತ್ತು ಕೈಗಾರಿಕೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article