ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಲಕ್ಷ್ಮೀ ಹೆಬ್ಬಾಳಕರ್‌ 

Sandeep Malannavar
ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಲಕ್ಷ್ಮೀ ಹೆಬ್ಬಾಳಕರ್‌ 
WhatsApp Group Join Now
Telegram Group Join Now
ಜೆಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ
 ವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ವಿಶೇಷ ಅಧಿವೇಶನದ ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರಾದ ಪಿ.ಎಚ್‌.ಪೂಜಾರ‌ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.
ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್‌ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀಗಾಗಿಯೇ ನಿರ್ಮಿಸಲಾಗಿರುವ ಸಾಫ್ಟ್‌ ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಾಗಲೇ ಆದಾಯ ತೆರಿಗೆ ಜಿಎಸ್‌ಟಿ ಕೌನ್ಸಿಲ್‌ ಗಮನಕ್ಕೂ ತರಲಾಗಿದೆ ಎಂದರು.
WhatsApp Group Join Now
Telegram Group Join Now
Share This Article