ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಎಸ್.ಸಿ.ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಮಂಗಳವಾರ ಪೂಜೆ ನೆರವೇರಿಸಿದರು.
ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೇರವೇರಿಸಿ, ಕಾಮಗಾರಿಗೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಸ್ಥಳೀಯರು ಮೃಣಾಲ್ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು.
ಈ ವೇಳೆ ಸ್ಥಳೀಯ ನಿವಾಸಿಗಳು, ಗುತ್ತಿಗೆದಾರರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.