ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Ravi Talawar
ರೈತ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ
WhatsApp Group Join Now
Telegram Group Join Now
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದಲ್ಲಿ ರೈತ ಸಮುದಾಯ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರು ಮಾಡಲಾಗಿದ್ದು, ಗ್ರಾಮಸ್ಥರ ಬೇಡಿಕೆಯಂತೆ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗುತ್ತಿದೆ.
ಈ ವೇಳೆ ಯುವರಾಜ ಕದಂ, ಯಲ್ಲಪ್ಪ ಕಲಕಾಂಬ್ಕರ್, ಮಾರುತಿ ಪಾಟೀಲ, ಮಹಾದೇವ ಕಂಗ್ರಾಳಕರ್, ಪರಶುರಾಮ ತೋರೆ, ನಿರ್ಮಲಾ ಕಲಕಾಂಬ್ಕರ್, ರಾಜಶ್ರೀ ಕೆ, ಸರಿತಾ ತುಪ್ಪಟ್, ವೈಶ್ಣವಿ ಖಟಾವಕರ್, ಪಿಡಿಓ ವೀಣಾ ಹಲವಾಯಿ, ವರ್ಷಾ ಸಂಗನಕರ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article