ರಾಯಬಾಗ: ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಒಳ್ಳೆಯ ಯೋಜನೆ ಜಾರಿಗೆ ತಂದು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವುತ್ತಿದ್ದಾರೆ ಎಂದು ಶಾಸಕ ಡಿ.ಎಮ್.ಐಹೊಳೆಯವರು ಹೇಳಿದರು.
ಗುರುವಾರ ಪಟ್ಟಣದ ದತ್ತ ಮಂದಿರದ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ರಾಯಬಾಗ ಮಂಡಲ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75 ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತವಾದ ಆಡಳಿತವನ್ನು ನೀಡುವ ಮೂಲಕ ದೇಶದ ಜನರ ಜೀವನ ಶೈಲಿಯನ್ನು ಬದಲಾಯಿಸಿದ ಧೀಮಂತ ನಾಯಕ ನರೇಂದ್ರ ಮೋದಿಯವರಾಗಿದ್ದಾರೆ.
ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅನೇಕ ಜೀವಿಗಳ ಜೀವ ರಕ್ಷಣೆ ಮಾಡಲು ಸಾಧ್ಯ ಎಂದು ಹೇಳಿದರು. ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಬಸವರಾಜ ದೋಣವಾಡೆ, ಸದಾಶಿವ ಘೋರ್ಪಡೆ, ಸದಾನಂದ ಹಳಿಂಗಳಿ, ಶಿವಾನಂದ ಐಹೊಳೆ, ಮಹೇಶ ಕರಮಡಿ, ಅನೀಲ ಹಂಜೆ, ಅಮೃತ ಕುಲಕರ್ಣಿ, ವಿಜಯ ಆಕಳೆ, ರಮಜಾನ ಮಂಕಾನಂದಾರ, ಕಲ್ಲಪ್ಪ ಸನದಿ, ಸಂಜಯ ಮೈಶಾಳೆ ವಿರೇಂದ್ರ ಬ್ಯಾಕೊಡೆ, ಮಾರುತಿ ಬಂತೆ, ಕರೆಪ್ಪ ಪೂಜೇರಿ, ಗೋಪಾಲ ಕೋಚರೆ, ಸುನೀಲ ಶಿಂದೆ ಸೇರಿದಂತೆ ಬಿಜೆಪಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.


