ಖಾಯಂ ಜನತಾ ನ್ಯಾಯಾಲಯದ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ

Ravi Talawar
ಖಾಯಂ ಜನತಾ ನ್ಯಾಯಾಲಯದ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ
WhatsApp Group Join Now
Telegram Group Join Now
ಧಾರವಾಡ :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಖಾಯಂ ಜನತಾ ನ್ಯಾಯಾಲಯ ಹಾಗೂ ಕೆ.ಪಿ.ಇ.ಎಸ್, ಡಾ. ಜಿ.ಎಮ್.ಪಾಟೀಲ, ಕಾನೂನು ಮಹಾವಿದ್ಯಾಲಯ ಧಾರವಾಡ ಇವರ ಸಹಯೋಗದಲ್ಲಿ  ಖಾಯಂ ಜನತಾ ನ್ಯಾಯಾಲಯದ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಜಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಧಾರವಾಡ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ನಾಗರಾಜಪ್ಪ ಎ.ಕೆ, ಉದ್ಘಾಟಿಸಿ, ಮಾತನಾಡಿದರು. ಸಾರ್ವಜನಿಕ ಉಪಯುಕ್ತತೆಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಿಕೊಳ್ಳಲು ಇರುವ ಕಾನೂನುಗಳ ಬಗ್ಗೆ ಖಾಯಂ ಜನತಾ ನ್ಯಾಯಾಲಯದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತಿಳಿಸಿದರು ಹಾಗೂ ಕರ್ನಾಟಕ ರಾಜ್ಯದಲ್ಲಿ ಒಟ್ಟು 06 ಖಾಯಂ ಜನತಾ ನ್ಯಾಯಾಲಯ ಸ್ಥಾಪನೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಧಾರವಾಡ ಖಾಯಂ ಜನತಾ ನ್ಯಾಯಾಲಯದಲ್ಲಿ 07 ಜಿಲ್ಲೆಗಳಾದ ಧಾರವಾಡ, ಬಳ್ಳಾರಿ, ಗದಗ, ಕೊಪ್ಪಳ, ಹಾವೇರಿ, ಡಾವಣಗೆರೆ ಮತ್ತು ಉತ್ತರ  ಕನ್ನಡ  ಜಿಲ್ಲೆಗಳಲ್ಲಿನ  ವ್ಯಾಪ್ತಿಯಲ್ಲಿ  ಬರುವ  ಪ್ರಕರಣಗಳನ್ನು  ದಾಖಲು  ಮಾಡಿಕೊಂಡು ತೀರ್ಪು  ನೀಡುವ  ಅಧಿಕಾರ ಹೊಂದಿರುತ್ತದೆ. ಸದರಿ ನ್ಯಾಯಾಲಯದ ಸದುಪಯೋಗವನ್ನು ಸಾರ್ವಜನಿಕರಿಗೆ ಬಳಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚಿನ ಪ್ರಚಾರ ಮಾಡುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್ ದೊಡ್ಡಮನಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಂಜೀವ ಪಾಟೀಲ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಶ್ವೇತಾ ದೇಶಪಾಂಡೆ, ಸಹಾಯಕ ಪ್ರಾಧ್ಯಾಪಕರು ಹಾಗೂ ಕಾಲೇಜಿನ ಭೋದಕ ಹಾಗೂ ಭೋದಕೇತರ ಸಿಬ್ಬಂದಿಗಳು ಮತ್ತು ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು
WhatsApp Group Join Now
Telegram Group Join Now
Share This Article