ಪಕ್ಷವನ್ನು ಅಧಿಕಾರಕ್ಕೆ ತಂದ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲಿ ; ಭಟ್ಟಿ ಯರಿಸ್ವಾಮಿ 

Ravi Talawar
ಪಕ್ಷವನ್ನು ಅಧಿಕಾರಕ್ಕೆ ತಂದ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲಿ ; ಭಟ್ಟಿ ಯರಿಸ್ವಾಮಿ 
WhatsApp Group Join Now
Telegram Group Join Now
ಬಳ್ಳಾರಿ. 01.: ಸಿದ್ದರಾಮಯ್ಯ ರಾಜಕೀಯವಾಗಿ ಸುಮಾರು 40 ವರ್ಷಗಳ ಅನುಭವವನ್ನು ಹೊಂದಿದ ವ್ಯಕ್ತಿಯಾಗಿದ್ದಾರೆ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಸುಮಾರು 16 ಬಜೆಟ್ ಗಳನ್ನು ಮಂಡಿಸಿ ಯಶಸ್ವಿ ಮುಖ್ಯಮಂತ್ರಿಯಾಗಿ ದೇಶಾದ್ಯಂತ ಹೆಸರು ಗಳಿಸಿದ್ದಾರೆ ಇವರನ್ನೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಸಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಟ್ಟಿ ಯರಿಸ್ವಾಮಿ  ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದರು.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಮತಗಳನ್ನು ಒಟ್ಟುಗೂಡಿಸಿ ಸರ್ಕಾರಕ್ಕೆ ಬಹುಮತವನ್ನು ತಂದುಕೊಟ್ಟಿದ್ದಾರೆ ಅಷ್ಟೇ ಅಲ್ಲದೆ, ಈಗಿನ ಸರ್ಕಾರದ ಶೇಕಡಾ 80ರಷ್ಟು ಶಾಸಕರು ಸಿದ್ದರಾಮಯ್ಯನ ಪರವಾಗಿ ಇದ್ದಾರೆ ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ಪಡೆಯಬಾರದು ಅವರನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದ ಎರಿಸ್ವಾಮಿ, ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆದುಕೊಂಡಿದ್ದೇನೆ ನಿಜವಾಗಲಿ ಇಡೀ ರಾಜ್ಯದ್ಯಂತ ಅಹಿಂದ ಜನ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪಡೆ ಮತ್ತು ಕುರುಬ ಜನಾಂಗದ ವತಿಯಿಂದ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಜೊತೆಗೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಂದ ಮತ್ತು ಕುರುಬ ಸಮಾಜ ಕೆಲಸ ಮಾಡುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.
 ಈ ಪತ್ರಿಕಾಗೋಷ್ಠಿಯಲ್ಲಿ ಸಣ್ಣ ವಿರೂಪಾಕ್ಷಪ್ಪ ದುರ್ಗೇಶ್ ಉಮೇಶ್ ಕೃಷ್ಣ ಕೆ ನಾಗರಾಜ್ ಬೆಳ್ಳಿಕಟ್ಟಪ್ಪ ಸೂರ್ಯದೇವ ಪ್ರಶಾಂತ್ ಕುಮಾರ್ ನಾಗರಾಜ್ ಬೀರಪ್ಪ ಪ್ರಭಾಕರ್ ಇದ್ದರು.
WhatsApp Group Join Now
Telegram Group Join Now
Share This Article