ಬಳ್ಳಾರಿ,ಫೆ,10- ಸಹಕಾರವು ಶರಣ ಸಂಸ್ಕೃತಿಯ ಜೀವಾಳವೇ ಆಗಿದೆ. ಹೊಸಪೇಟೆಯ ಈ ಬ್ಯಾಂಕ್ ಸ್ಥಾಪನೆ ಅದರ ಮುಂದುವರೆದ ಭಾಗವೇ ಆಗಿದೆ. ಸಮಾಜದ ವಿಸ್ಮೃತಿಗೆ ಒಳಗಾದ ಶ್ರೀ ಶರಣ ಸಕ್ಕರೆ ಕರಡೀಶ ಅವರ ಹೆಸರು ಈ ಸಹಕಾರಿ ಸಂಘಕ್ಕೆ ಇಟ್ಟಿದ್ದು ಸಮಯೋಚಿತ ಆಗಿದೆ ಎಂದು ಕೊಟ್ಟೂರು ಶ್ರೀಗಳು ಅಭಿಪ್ರಾಯ ಪಟ್ಟರು.
ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ನ ಹೊಸಪೇಟೆ ಶಾಖೆಯ ಉದ್ಘಾಟನೆ ಮಾಡಿ ಮಾತನಾಡಿದ, ಅವರು ಬಡವರು, ಮಧ್ಯಮ ವರ್ಗದ ಜನರಿಗೆ ಈ ಸಂಘ ಅನುಕೂಲ ಮಾಡಲಿ ಎಂದು ಹಾರೈಸಿದರು. ಬಂದ ಲಾಭದ ಸ್ವಲ್ಪ ಭಾಗವನ್ನು ಸಮಾಜಕ್ಕೂ ಹಂಚಬೇಕು ಎಂದು ಒತ್ತಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರ ಅವರು ಮಾತನಾಡಿ “ಸಹಕಾರಿ ಸಂಘ ಬೆಳೆಯುತ್ತಿರುವುದು ತುಂಬ ಸಂತೋಷದ ಸಂಗತಿ. ಪಾರದರ್ಶಕ ಆಡಳಿತ ನೀಡಿದರೆ ಖಂಡಿತ ಸಹಕಾರ ಕ್ಷೇತ್ರ ಬೆಳವಣಿಗೆ ಆಗುವುದು ಖಚಿತ” ಎಂದು ಹೇಳಿದರು.
ಸಂಡೂರಿನ ಪ್ರಭುದೇವರ ವಿರಕ್ತಮಠದ ಸ್ವಾಮೀಜಿಗಳಾದ ಪ್ರಭುಸ್ವಾಮಿಗಳು ಆಶೀರ್ವಚನ ನೀಡಿದರು.
ಇನ್ನೋರ್ವ ಅತಿಥಿಗಳಾದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷರಾದ ಜೀ.ನಂಜನಗೌಡರು ಮಾತನಾಡಿ ” ಸಹಕಾರಿ ಸಂಸ್ಥೆ ನಿಜಕ್ಕೂ ಆರ್ಥಿಕವಾಗಿ ಸುಭದ್ರವಾಗಿದೆ. ಠೇವಣಿ ಸಂಗ್ರಹಣೆಗೆ ಯಾವ ಕೊರತೆಯೂ ಇಲ್ಲ. ಸಾಲ ಮಂಜೂರಾತಿಯಲ್ಲಿ ಸರಳ ನಿಯಮಗಳನ್ನು ಅಳವಡಿಸಿದ್ದೇವೆ. ಎಂದು ಹೇಳಿದರು.
ಜೀ. ನೀಲಕಂಠಪ್ಪ, ಬಳ್ಳಾರಿ ಶ್ರೇಷ್ಠ ಸಹಕಾರಿ ರತ್ನ ಪ್ರಶಸ್ತಿ ಪಡೆದಿದ್ದಾರೆ. ಅವರಿಗೆ ಸನ್ಮಾನ ಮಾಡಿದರು. ವಿವಿಧ ಗಣ್ಯರಿಗೆ ಸನ್ಮಾನ ಮಾಡಲಾಯಿತು.
ಶ್ರೀಮತಿ ಎನ್ ಪುಷ್ಪಾ ಮಲ್ಲಿಕಾರ್ಜುನ ಅವರು ಪ್ರಾರ್ಥನೆ ನೆರವೇರಿಸಿದರು. ಪ್ರಾಸ್ತಾವಿಕ ನುಡಿಯನ್ನು ಬ್ಯಾಂಕಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಲ್ಗುಡಿ ಮಂಜುನಾಥ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಡಾ. ಮೃತ್ಯುಂಜಯ ರುಮಾಲೆ ಅವರು ಬರೆದ “ಶರಣ ಸಕ್ಕರೆ ಕರಡೆಪ್ಪನವರು” ಚಿತ್ತರಗಿ ಪೂಜ್ಯರಿಂದ ಬಿಡುಗಡೆ ಗೊಳಿಸಲಾಯಿತು.
ಷಾ ಭವರಲಾಲ್ ನಾಹರ್ ಬಿ.ಇಡಿ ಕಾಲೇಜಿನ ಅಧ್ಯಕ್ಷ ಗುಡೇಕೋಟೆ ನಾಗರಾಜ್ ಅವರು ವಂದನಾರ್ಪಣೆ ಮಾಡಿದರು


