ಮಕ್ಕಳಿಗೆ ಅವರ ಬಾಲ್ಯ ಆನಂದಿಸಲು ಸಹಕರಿಸೋಣ: ಜಿಲ್ಲಾಧಿಕಾರಿ ದಿವ್ಯ ಪ್ರಭು

Ravi Talawar
ಮಕ್ಕಳಿಗೆ ಅವರ ಬಾಲ್ಯ ಆನಂದಿಸಲು ಸಹಕರಿಸೋಣ: ಜಿಲ್ಲಾಧಿಕಾರಿ ದಿವ್ಯ ಪ್ರಭು
WhatsApp Group Join Now
Telegram Group Join Now
ಧಾರವಾಡ ಜೂನ್.12: ಸಣ್ಣ ವಯಸ್ಸಿನ ಮಕ್ಕಳನ್ನು ವಿದ್ಯೆ ಕಲಿಯುವ ಹೊತ್ತಿನಲ್ಲಿ ದುಡಿಮೆಗೆ ಕಳಿಸಬಾರದು. ಇದು ಅಪರಾಧ. ಸರಕಾರ, ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಕಾನೂನು ರಚಿಸಿ, ಜಾರಿಗೊಳಿಸಿವೆ. ಮಕ್ಕಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳೆಸಲು ನಾವು ಆಧ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ನಗರದ ಭಾರತ ಪ್ರೌಢಶಾಲೆಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು.
ಬಾಲ ಮತ್ತು ಕಿಶೋರ ಮಕ್ಕಳನ್ನು ದುಡಿಮೆಗೆ ಕಳಿಸಬಾರದು. ಅವರಿಗೆ ಉತ್ತಮ ಸಂಸ್ಕಾರ ನೀಡಿ, ಶಿಕ್ಷಣ ಮತ್ತು ಕೌಶಲ್ಯಭರಿತ ತರಬೇತಿಯನ್ನು ನೀಡಬೇಕು.  ಮಕ್ಕಳನ್ನು ಬೆಳೆಸುವಾಗ ಹೆಣ್ಣು ಗಂಡು ಎಂಬ ಭೇದವಿರಬಾರದು. ಇಬ್ಬರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವುದನ್ನು ಮೂಲಭೂತ ಹಕ್ಕಾಗಿ ಅವರಿಗೆ ಕಲ್ಪಿಸಿದೆ ಎಂದು ಅವರು ತಿಳಿಸಿದರು.
 ಪ್ರತಿಯೊಬ್ಬರು ಮಕ್ಕಳ ಉತ್ತಮ ಭವಿಷ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ದೇಶದ ಭವಿಷ್ಯ ಭಾವಿ ಪ್ರಜೆಗಳ ಕೈಯಲ್ಲಿದೆ. ಅವರ ಊಟ, ಆಟ, ಪಾಠದ ಜೊತೆಗೆ ಉತ್ತಮ ಸಂಸ್ಕಾರ, ರಾಷ್ಟ್ರ ಪ್ರೇಮ, ದೇಶಾಭಿಮಾನ ಬೆಳೆಸಲು ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಕ್ಕಳು ಟಿ.ವಿ, ಮೊಬೈಲ್ ಎಂದು ಸಮಯ ಹಾಳು ಮಾಡದೇ, ಓದು, ಆಟ, ಪಾಠದ ಬಗ್ಗೆ ಗಮನ ಹರಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ತೊಂದರೆ, ಕಿರುಕುಳ, ಹಲ್ಲೆ ಆದಾಗ ಭಯಪಡದೆ ಶಾಲೆಯ ಶಿಕ್ಷಕರಿಗೆ, ಪಾಲಕರಿಗೆ ಅದರಲ್ಲೂ ವಿಶೇಷವಾಗಿ ಮನೆಯಲ್ಲಿ ತಾಯಿಗೆ ಮಾಹಿತಿ ನೀಡಬೇಕು. ಇದು ಎಲ್ಲ ಮಕ್ಕಳಿಗೂ ಅನ್ವಯಿಸುತ್ತದೆ. ಬಾಲ್ಯವಿವಾಹ, ಒತ್ತಾಯದ ದುಡಿಮೆ ತಡೆಯಲು ನೇರವಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಮಕ್ಕಳಿದ್ದಾಗಲೇ, ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬ ಅರಿವನ್ನು ಅವರಲ್ಲಿ ಮೂಡಿಸುವ ಅಗತ್ಯವಿದೆ. ಧಾರವಾಡ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆಗಳು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ವರ್ಷಪೂರ್ತಿ ನಿರಂತರವಾಗಿ ಹಮ್ಮಿಕೊಳ್ಳುವದರಿಂದ ಮಕ್ಕಳಲ್ಲಿ ಬಾಲಾಪರಾಧ, ಬಾಲ ಕಾರ್ಮಿಕ ಪದ್ದತಿ ನಿμÉೀಧ, ಬಾಲ್ಯ ವಿವಾಹ ನಿμÉೀಧ, ಪೆÇೀಕ್ಸೊ ಮುಂತಾದ ಕಾಯ್ದೆಗಳ ಬಗ್ಗೆ ಮತ್ತು ಶೈಕ್ಷಣಿಕ ಹಕ್ಕುಗಳ ಬಗ್ಗೆ ಸಾಕಷ್ಟು ತಿಳುವಳಿಕೆ ಮೂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್ ದೊಡ್ಡಮನಿ ಅವರು, ದೇಶದಲ್ಲಿ ಬಡತನ ಮತ್ತು ಶಿಕ್ಷಣದ ಕೊರತೆಯಿಂದಾಗಿ ಬಾಲ ಕಾರ್ಮಿಕ ಪದ್ದತಿ ಇಂದಿಗೂ ಮುಂದುವರಿದೆ. ಮಕ್ಕಳ ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕಡ್ಡಾಯ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಇದರ ಬಗ್ಗೆ ಅರಿವು ಮೂಡಿಸಬೇಕೆಂದು ಹೇಳಿದರು.
ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಬಾರದು ಎಂಬ ಅನಿಷ್ಟ ಪದ್ದತಿ ಜಾರಿಯಲ್ಲಿತ್ತು. ಅದನ್ನು ವಿರೋಧಿಸಿ ಜ್ಯೋತಿಬಾಪುಲೆ ಅವರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದರು. ಬ್ರಿಟಿಷರು ಸಹ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ಅವರು ಹೇಳಿದರು.
ಇತಿಹಾಸ ಅವಲೋಕಿಸಿದರೆ, ಮಕ್ಕಳನ್ನು ಅತೀ ಹೆಚ್ಚು ಕಠಿಣ ಹಾಗೂ ಅಪಾಯಕಾರಿ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಮಕ್ಕಳು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಪಾಳೇಗಾರಿಕೆ, ಜಮೀನ್ದಾರ ಪದ್ಧತಿ ಹಾಗೂ ಬಂಡವಾಳ ಶಾಹಿ ಪದ್ಧತಿಗಳಲ್ಲಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಅವರು ಹೇಳಿದರು.
14 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂಬುವುದು ನಮ್ಮ ಸಂವಿಧಾನದ 21ನೇ ವಿಧಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು.
ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದರಿಂದ ಅವರು, ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡುತ್ತಾರೆ. ನವ ಸಮಾಜ ನಿರ್ಮಿಸುವ ಶಕ್ತಿ ವಿದ್ಯಾಭ್ಯಾಸಕ್ಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಬಾಲ ಕಾರ್ಮಿಕ ವಿರೋಧಿ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ಬಿಡುಗಡೆಯಾಗಿ ಶಾಲಾ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ, ಜಿಲ್ಲಾಧಿಕಾರಿಗಳು ಶೈಕ್ಷಣಿಕ ಕಿಟ್ ವಿತರಿಸಿದರು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಸ್ವಾಗತಿಸಿದರು.
ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ವಂದಿಸಿದರು.
ವೇದಿಕೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷ ಎಂ.ಎನ್.ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಪೆÇಲೀಸ ಅಧಿಕಾರಿ ಒಡೆಯರ್ ಇದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಅಕ್ರಮ ಅಲ್ಲಾಪುರ, ಭುವನೇಶ್ವರಿ ಕೋಟಿಮಠ, ಮೀನಾಕ್ಷಿ ಶಿಂದಿಹಟ್ಟಿ, ರಜನಿ ಹಿರೇಮಠ, ಸಂಗೀತಾ ಬೆನಕನಕೊಪ್ಪ, ಲತಾ ಟಿ.ಎಸ್. ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಭಾರತ ಪ್ರೌಢಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article