ಬಳ್ಳಾರಿ,ಅ.02: ಗಾಂಧೀಜಿಯವರು ಕಂಡ ಕನಸು ಸ್ವಚ್ಛ ಭಾರತ. ಪ್ರತಿಯೊಬ್ಬ ನಾಗರಿಕರು ವಾರದಲ್ಲಿ ಎರಡು ಗಂಟೆಗಳ ಕಾಲ ಶ್ರಮದಾನ ಮಾಡಿದರೆ ಗಾಂಧೀಜಿ ಅವರ ಕನಸು ನನಸಾಗುವುದು. ಹಾಗಾಗಿ ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಕೊಳಗಲ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಾದಿಲಿಂಗಪ್ಪ ಅವರು ಹೇಳಿದರು.
ಕೇಂದ್ರ ಸಂವಹನ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮ ಪಂಚಾಯತಿ ಕೊಳಗಲ್ಲು ಇವರÀ ಸಂಯುಕ್ತಾಶ್ರಯದಲ್ಲಿ ಕೊಳಗಲ್ಲು ಗ್ರಾಮದ ಈರಣ್ಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಸ್ವಚ್ಛತೆಯೇ ಸೇವೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರೂ ಪಾಲಿಸೋಣ. ಅವರು ಕಂಡ ಕನಸು ನನಸು ಮಾಡಬೇಕಾದರೆ ಮೊದಲು ಗ್ರಾಮಗಳು ಸ್ವಚ್ಛವಾಗಬೇಕು ಎಂದು ಹೇಳಿದರು.
ಸ್ವಚ್ಛ ಭಾರತ ಜಿಲ್ಲಾ ಸಂಯೋಜಕ ಮರಿಸ್ವಾಮಿ ಅವರು ಮಾತನಾಡಿ, ಗ್ರಾಮಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎಂದು ತಿಳಿಸಿದರು.
ಕೊಳಗಲ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಶಾಷಾವಲಿ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಪಂಚಾಯಿತಿಯವರು ನಿಯೋಜಿಸಿರುವ ಸ್ವಚ್ಛತಾ ವಾಹನಗಳಿಗೆ ತಪ್ಪದೇ ಕಸವನ್ನು ನಿಡಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದರು.
ಗಾAಧೀಜಿ ಜಯಂತಿ ಅಂಗವಾಗಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ರಂಗೋಲಿ, ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥದಲ್ಲಿ ಎಲ್ಲಾ ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಸಂಗೀತ ಮತ್ತು ನಾಟಕ ವಿಭಾಗದ ಕಲಾ ತಂಡದವರಿAದ ಜನಪದ ಗೀತೆಗಳ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಹೊನ್ನೂರಪ್ಪ, ರಾಮಕೃಷ್ಣ, ಪಲ್ಲವಿ, ಈರಣ್ಣ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ.ದಿವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯಾದ ಕಲ್ಯಾಣಮ್ಮ, ಕೇಂದ್ರ ಸಂವಹನ ಇಲಾಖೆಯ ಎನ್.ರಾಮಕೃಷ್ಣ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


