ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು : ಸಿಎಂ, ಡಿಸಿಎಂ ಸಾಹಿತಿ ಹಂಪ ನಾಗರಾಜಯ್ಯ ಕಿವಿಮಾತು

Ravi Talawar
ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು : ಸಿಎಂ, ಡಿಸಿಎಂ ಸಾಹಿತಿ ಹಂಪ ನಾಗರಾಜಯ್ಯ ಕಿವಿಮಾತು
WhatsApp Group Join Now
Telegram Group Join Now

ಮೈಸೂರು, ಅಕ್ಟೋಬರ್ 3: ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯುವಕರು ಮೋದಿ ಮೋದಿ ಎಂದು ಮುಂದುವರಿಯುತ್ತಿದ್ದಾರೆ. ಹಾಗೆಂದು ಸರ್ಕಾರ ಅಸ್ಥಿರಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದರು.

ದಸರಾ ಎಂಬುದು ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ, ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತ. ದಸರಾ ಅರಮನೆ ಹಬ್ಬವಲ್ಲ, ಜನ ಆರಿಸಿದ ಸರ್ಕಾರ ನಡೆಸುವ ಹಬ್ಬ ಎಂದು ನಾಗರಾಜಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಷ್ಟೇ ಅಡ್ಡಿ ಆತಂಕಗಳು ಎದುರಾಗುತ್ತಿದ್ದರೂ ಎದೆಗುಂದದೆ ಸೆಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ, ಸೌಮ್ಯ ಸ್ವಭಾವ ದೌರ್ಬಲ್ಯವಲ್ಲ ಎಂದರು. ಆ ಮೂಲಕ ಹಂಪ ನಾಗರಾಜಯ್ಯ ಪರೋಕ್ಷವಾಗಿ ಸಿದ್ದರಾಮಯ್ಯಗೆ ಧೈರ್ಯ ತುಂಬಿದರು. ಜತೆಗೆ, ಸಿಎಂ, ಡಿಸಿಎಂ ಒಂದು ರೀತಿಯಲ್ಲಿ ಗರಡಿ ಮನೆ ಆಳಿನಂತೆ ಜಟ್ಟಿಗಳು ಬಣ್ಣಿಸಿದರು.

 

WhatsApp Group Join Now
Telegram Group Join Now
Share This Article