ಬೆಂಗಳೂರು, ಮೇ 31: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ (ಮುಂಬಯಿ ಮಾದರಿಯಲ್ಲಿ) ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ.