ಗದಗ, ಏಪ್ರಿಲ್11:-ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸಂಬಂಧಪಟ್ಟ ಚುನಾವಣಾಧಿಕಾರಿಗಳಾದ 10-ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಹಾವೇರಿ ಹಾಗೂ 3-ಬಾಗಲಕೋಟ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಬಾಗಲಕೋಟ ಇವರು ತಮ್ಮ ಕಾರ್ಯಾಲಯದಲ್ಲಿ ಸ್ವೀಕರಿಸುವರು.
ನಾಮಪತ್ರ ಸಲ್ಲಿಸಲು ಏಪ್ರಿಲ್, 19 ಕೊನೆಯ ದಿನವಾಗಿದೆ. ಏಪ್ರಿಲ್, 20 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ತಿಳಿಸಿದ್ದಾರೆ.
ದಿನಾಂಕ : 22.01.2024 ರಂದು ಪ್ರಕಟಗೊಂಡ ಅಂತಿಮ ಮತದಾರ ಪಟ್ಟಿಯ ನಂತರ ಈವರೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗದಗ ಜಿಲ್ಲೆಯಲ್ಲಿ 888816 ಮತದಾರರು ಇದ್ದು, ಇವರಲ್ಲಿ 443291 ಪುರುಷ ಮತದಾರರು ಮತ್ತು 445464 ಮಹಿಳಾ ಮತದಾರರು ಇದ್ದಾರೆ. 61 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.