‘ನಸುಕಿನಲ್ಲೇ ಲೋಕಾ ದಾಳಿ’ ಅನಧಿಕೃತ ಆಸ್ತಿ ಸಂಪಾದನೆ ಆರೋಪ; ಪಿಡಿಒ ವಶಕ್ಕೆ

Ravi Talawar
‘ನಸುಕಿನಲ್ಲೇ ಲೋಕಾ ದಾಳಿ’ ಅನಧಿಕೃತ ಆಸ್ತಿ ಸಂಪಾದನೆ ಆರೋಪ; ಪಿಡಿಒ ವಶಕ್ಕೆ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 27: ಅಕ್ರಮ ಆಸ್ತಿಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ ರಾಜ್ಯದ ಹಲವಡೆ ದಾಳಿ ನಡೆಸಿದ್ದಾರೆ.

ರಾಜ್ಯದ ಅತಿ ಶ್ರೀಮಂತ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆದಿರುವ ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕ ಗ್ರಾಮ ಪಂಚಾಯತಿಯ ಪಿಡಿಒ ಯತೀಶ್ ಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಲ್ಟನ್ ರೆಟ್‌ನಲ್ಲಿ ಪಿಡಿಓಓಯತೀಶ್‌ನನ್ನು ಅಧಿಕಾರಿಗಳು ನಿಯೋಜಿಸಿದ್ದು, ವಿಚಾರಣೆಗೆ. ಲೋಕಾಯುಕ್ತ ಅಧಿಕಾರಿಗಳು ಯತೀಶ್ ಚಂದ್ರ ಅವರಿಗೆ ಸೇರಿದ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

ಪಿ ಡಿಒ ಯತೀಶ್ ಚಂದ್ರ ಕಳೆದೆರಡು ವರ್ಷಗಳಲ್ಲಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿದ್ದರು. ಯತೀಶ್ ಮೈಸೂರಿನಲ್ಲಿ ಪತ್ನಿ ಹೆಸರಿನಲ್ಲಿ ಮನೆ ಕಟ್ಟುತ್ತಿದ್ದಾರೆ. ಮನೆಗೆ ಐದು ಕೋಟಿಗೂ ಅಧಿಕ ಖರ್ಚು ಮಾಡಿದೆ. ಯತೀಶ ಮೈಸೂರಿನಲ್ಲಿಯೇ ಎರಡು ಮನೆ ವೈದ್ಯರು.

ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚೀಫ್ ಇಂಜಿನಿಯರ್ ರಂಗನಾಥ್ ಅವರಿಗೆ ಸೇರಿದ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಉತ್ತರ ಕನ್ನಡ ಮತ್ತು ಬೀದರ್ ಜಿಲ್ಲೆಯ ಇಬ್ಬರು ಅಧಿಕಾರಿಗಳು, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್ನಲ್ಲಿರುವ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಬೀದರ್ ಜಿಲ್ಲೆಯ ಭಾಕಿ ಕಾರಂಜಾ ವಿಭಾಗದ ಎಲಿಕಲ್ಚರ್ ಶಿವಕುಮಾರ್ ಸ್ವಾಮಿ ಅವರಿಗೆ ಸೇರಿದ ಬೀದರ್ ನಗರದ ಅಗ್ರಿಕಲ್ ಕಾಲೋನಿಯಲ್ಲಿರುವ ಮನೆ, ಕಲಬುರಗಿ ನಗರದ ಎಂ.ಬಿ. ಕಾಲೋನಿಯಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶಿಬಾ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಯೊ ಶೀಬಾ ಕಳೆದ ಒಂದು ತಿಂಗಳಿನಿಂದ ರಜೆಯಲ್ಲಿದ್ದಾರೆ.

 

 

 

 

WhatsApp Group Join Now
Telegram Group Join Now
Share This Article