ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ ‘ಲೋಕಾ’ಬಲೆಗೆ

Ravi Talawar
ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ ‘ಲೋಕಾ’ಬಲೆಗೆ
WhatsApp Group Join Now
Telegram Group Join Now

ಕೊಪ್ಪಳ, ಮೇ 30: ಕೊಪ್ಪಳದಲ್ಲಿ ಲೋಕಾಯುಕ್ತ ಪೊಲೀಸರು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ರಮೇಶ್ ಬಸವವಗೌಡ ಎಂದು ಗುರುತಿಸಲಾಗಿದೆ.

ರಮೇಶ್ ಇಲಾಖೆಯಲ್ಲಿ ಟೌನ್ ಪ್ಲ್ಯಾನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಲೇಔಟ್ ಪರವಾನಗಿ ನೀಡಲು ಎಂಟು ವ್ಯಕ್ತಿಯೊಬ್ಬರ ಬಳಿ ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು. ಖಾಸಗಿ ಸಹಾಯಕನ ಮೂಲಕ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರ ಮೂಲದ ರವಿಚಂದ್ರ ಅನ್ನೋರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ರವಿಚಂದ್ರ ಎಂಬವರಿಂದ ಮೂರು ಲಕ್ಷ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ರಮೇಶ್ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರಾಯಚೂರು ಲೋಕಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

WhatsApp Group Join Now
Telegram Group Join Now
Share This Article