ಬಳ್ಳಾರಿ:ಅ, 23- ತಾಲೂಕಿನ 14 ಗ್ರಾಮ ಪಂಚಾಯತಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿ ನಗರದ ಸುತ್ತಮುತ್ತಲಿರುವ ಶ್ರೀಧರಗಡ್ಡೆ, ಪಿಡಿ.ಹಳ್ಳಿ, ಅಮರಾಪುರ, ಸಂಗನಕಲ್ಲು, ಹಲಕುಂದಿ ಸೇರಿದಂತೆ 14 ಗ್ರಾಮ ಪಂಚಾಯ್ತಿಗಳಲ್ಲಿ 11 ಇ ಸ್ಕೆಚ್ ನೀಡಲು ವಿಳಂಬ ಮಾಡುತ್ತಿರುವ ಬಗ್ಗೆ ಹಾಗು 14 ನೇ ಹಣಕಾಸು ಯೋಜನೆಯ ಹಣ ಬಳಕೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ಮಾಡಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬಂದ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.