ಚಿಕ್ಕಮಗಳೂರು, ಸೆಪ್ಟೆಂಬರ್ 30: ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್ಪಿ ಸ್ನೇಹಾ ಅವರ ನೇತೃತ್ವದಲ್ಲಿ ಲೋಕಾಯುಕ್ತ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಹಾಗೂ ಹಲಸೂರು ತೋಟದ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ನಾಲ್ಕು ವಾಹನಗಳಲ್ಲಿ ಬಂದ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿ ಹಾಗೂ ತೋಟದಲ್ಲಿ ನಿಖರ ಶೋಧ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪರಿಶೀಲನೆ ಮುಂದುವರೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.


