ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಹಲವೆಡೆ ಲೋಕಾಯುಕ್ತ ದಾಳಿ

Ravi Talawar
ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಹಲವೆಡೆ ಲೋಕಾಯುಕ್ತ ದಾಳಿ
WhatsApp Group Join Now
Telegram Group Join Now

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸಂಜಯ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲೂ ಸಹ ಅಧಿಕಾರಿಗಳ ಮನೆ ಮೇಲೆ ಲೋಕಾಯು ಪೊಲೀಸರು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Share This Article