ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ

Ravi Talawar
ರಾಜ್ಯದ  25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ
WhatsApp Group Join Now
Telegram Group Join Now

ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಠ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ.

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್​ಪಿ ಮಹೇಶ್ ಮನೆ ಮೇಲೆ‌ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ.

ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್​ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

WhatsApp Group Join Now
Telegram Group Join Now
Share This Article