ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದಾಗಿ ರಾಜ್ಯದಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಳ್ಳಾರಿ ಜಿಲ್ಲಾ ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ಭೇಟಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಬಳ್ಳಾರಿ ಎಸ್ ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯನ್ನೊಳಗೊಂಡ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಲಗ್ಗೆ ಹಾಕಿತು.
ಪರಿಶೀಲನೆಯಲ್ಲಿ ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಯೂ ಇದ್ದಾರೆ. ಬಳ್ಳಾರಿಯಲ್ಲಿ ಆಗಿರುವ ಬಾಣಂತಿಯರ ಸರಣಿ ಸಾವು ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅದರ ಭಾಗವಾಗಿ ಇಂದು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.