ಹೊಸಪೇಟೆ (ವಿಜಯನಗರ) ಏಪ್ರಿಲ್ 06 ಗೌರವಾನ್ವಿತ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಹಾಗೂ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ ಮತ್ತು ಬಳ್ಳಾರಿಯ ಲೋಕಾಯುಕ್ತದ ಎಸ್ಪಿ ಅವರ ನಿರ್ದೇಶನದ ಮೇರೆಗೆ ಹೊಸಪೇಟೆ ಲೋಕಾಯುಕ್ತ ಘಟಕದಿಂದ ಏಪ್ರೀಲ್ 10ರಂದು ಕೂಡ್ಲಿಗಿ ತಾಲೂಕಿನಲ್ಲಿ, ಏಪ್ರೀಲ್ 16ರಂದು ಕೊಟ್ಟೂರ ತಾಲೂಕಿನಲ್ಲಿ ಏಪ್ರೀಲ್ 18ರಂದು ಹರಪನಹಳ್ಳಿ ತಾಲೂಕಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 10ರ ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ, ಕೊಟ್ಟೂರ ತಾಲೂಕಿನಲ್ಲಿ ಕೊಟ್ಟೂರ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 16ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ, ಹರಪನಹಳ್ಳಿ ತಾಲೂಕಿನಲ್ಲಿ ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 18ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು, ಅಹವಾಲುಗಳನ್ನು ಹಾಗೂ ಸಾರ್ವಜನಿಕರು ತಮ್ಮ ಸರ್ಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬತೆ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯವರ ದುರಾಡಳಿತಕ್ಕೆ ಸಂಬAಧಿಸಿದAತೆ ದೂರುಗಳಿದ್ದಲ್ಲಿ ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳ ನೇತೃತ್ವದಲ್ಲಿ ಈ ಮೇಲ್ಕಂಡAತೆ ವಿವಿಧ ತಾಲೂಕು ಕೇಂದ್ರಗಳಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳಗಳಲ್ಲಿ ಹಾಜರಾಗಿ ದೂರು ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.