ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ

MK HasiruKranti
ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ
WhatsApp Group Join Now
Telegram Group Join Now

ಬಳ್ಳಾರಿ,ಮಾ.28
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.31 ರಂದು ಬೆಳಿಗ್ಗೆ 11 ಗಂಟೆಗೆ ನಗರದ ತೇರು ಬೀದಿಯ ಶ್ರೀ ಪಾರ್ಶ್ವನಾಥ್ ಭವನದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಜೈನ್ ಸಂಘದ ಅಧ್ಯಕ್ಷ ಸುರಜ್ ಮಲ್ ಜೈನ್ ಸೇರಿದಂತೆ ಇತರರು ಭಾಗವಹಿಸುವರು.
ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಆಲಂಭಾಷ ಅವರು ಜಯಂತಿ ಕುರಿತು ವಿಶೇಷ ಉಪಪನ್ಯಾಸ ನೀಡುವರು. ಶ್ರೀ ಶಿರಡಿ ಸಾಯಿ ಸೇವಾ ಸತ್ಸಂಗ ಟ್ರಸ್ಟ್ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article