ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಾಕಷ್ಟು ಅನಾಹುತಗಳು; ಜಲರೂಪಕ್ಕೆ ತಿರುಗಿದ ರಾಜಧಾನಿ

Ravi Talawar
ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಾಕಷ್ಟು ಅನಾಹುತಗಳು; ಜಲರೂಪಕ್ಕೆ ತಿರುಗಿದ ರಾಜಧಾನಿ
WhatsApp Group Join Now
Telegram Group Join Now

ಬೆಂಗಳೂರು: ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದೆ. ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಮಳೆ ಹಾನಿಗಳು, ಸಮಸ್ಯೆಗಳ ಪರಿಹಾರ ಕಾರ್ಯಕ್ಕೆ ತಕ್ಷಣ 1000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಸಮರೋಪಾದಿ ಪರಿಹಾರ ಕಾಮಗಾರಿ ಆರಂಭಿಸಿ ಸಂತ್ರಸ್ತರ ನೆರವಿಗೆ ಧಾವಿಸುವಂತೆ ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ

WhatsApp Group Join Now
Telegram Group Join Now
Share This Article