ಮಡೆನೂರ್ ಮನು ನಾಯಕನಾಗಿ  ಕುಲದಲ್ಲಿ ಕೀಳ್ಯಾವುದೋ      

Ravi Talawar
ಮಡೆನೂರ್ ಮನು ನಾಯಕನಾಗಿ  ಕುಲದಲ್ಲಿ ಕೀಳ್ಯಾವುದೋ      
WhatsApp Group Join Now
Telegram Group Join Now
ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ ಕೆ ಮತ್ತು  ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ ಕುಲದಲ್ಲಿ ಕೀಳ್ಯಾವುದೋ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.
ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.  ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

 ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ  ರಘು, ದಿಗಂತ್ ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

WhatsApp Group Join Now
Telegram Group Join Now
Share This Article