ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ :ಮಧು ಬಂಗಾರಪ್ಪ

Ravi Talawar
ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ :ಮಧು ಬಂಗಾರಪ್ಪ
WhatsApp Group Join Now
Telegram Group Join Now

ಮೈಸೂರು, ಮೇ 28: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅಂದರೆ, ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪುಟ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಬಹುದು ಎಂಬ ವದಂತಿಗಳು ಹಬ್ಬಿದ್ದವು. ಈ ಹಿಂದೆ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಹೀಗಾಗಿ ಹಾಲಿ ಕಾಂಗ್ರೆಸ್ ಸರ್ಕಾರ ಅದನ್ನು ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇದಕ್ಕೆ ಪೂರಕವಾಗಿ, ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಸರ್ಕಾರ ಎನ್​​ಇಪಿ ರದ್ದುಪಡಿಸುವ ಬಗ್ಗೆ ಘೋಷಣೆ ಮಾಡಿತ್ತು. ಅದರ ಬದಲಿಗೆ ರಾಜ್ಯದಲ್ಲಿ ಎಸ್​​ಇಪಿ ಅನುಷ್ಠಾನಗೊಳಿಸುವುದಾಗಿಯೂ ಹೇಳಿತ್ತು. ಇದೀಗ ಎಲ್ಲ ಗೊಂದಲಗಳಿಗೆ ಶಿಕ್ಷಣ ಸಚಿವರೇ ತೆರೆ ಎಳೆದಿದ್ದಾರೆ.

WhatsApp Group Join Now
Telegram Group Join Now
Share This Article